ಯೆರೆಮೀಯ 51:7 - ಪರಿಶುದ್ದ ಬೈಬಲ್7 ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.