ಯೆರೆಮೀಯ 52:1 - ಪರಿಶುದ್ದ ಬೈಬಲ್1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಬ್ನ ಪಟ್ಟಣದ ನಿವಾಸಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್. ಅಧ್ಯಾಯವನ್ನು ನೋಡಿ |
ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.