Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:10 - ಪರಿಶುದ್ದ ಬೈಬಲ್‌

10 ರಿಬ್ಲ ನಗರದಲ್ಲಿ ಬಾಬೆಲಿನ ರಾಜನು ಚಿದ್ಕೀಯನ ಮಕ್ಕಳನ್ನು ಸಂಹರಿಸಿದನು. ಚಿದ್ಕೀಯನು ತನ್ನ ಮಕ್ಕಳ ಕೊಲೆಯನ್ನು ಕಣ್ಣಾರೆ ನೋಡುವಂತೆ ಮಾಡಲಾಯಿತು. ಬಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಧಿಕಾರಿಗಳನ್ನು ಸಹ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಅರಸನು ಚಿದ್ಕೀಯನಿಗೆ ಶಿಕ್ಷೆ ವಿಧಿಸಿ ಅವನ ಮಕ್ಕಳನ್ನು ಅವನ ಕಣ್ಣೆದುರಿಗೆ ವಧಿಸಿದ. ಜುದೇಯದ ಎಲ್ಲ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:10
12 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.


ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ.


ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.


ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.


ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.


ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು