ಯೆರೆಮೀಯ 52:11 - ಪರಿಶುದ್ದ ಬೈಬಲ್11 ತರುವಾಯ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನ್ನು ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನ್ನು ಬಿಗಿಸಿದನು. ಆಮೇಲೆ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಬಾಬಿಲೋನಿನಲ್ಲಿ ಚಿದ್ಕೀಯನನ್ನು ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು ಅವನಿಗೆ ಬೇಡಿ ಹಾಕಿ ಬಾಬೆಲಿಗೆ ತೆಗೆದುಕೊಂಡು ಹೋಗಿ ಅವನು ಜೀವದಿಂದಿರುವವರೆಗೆ ಸೆರೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.