ಯೆರೆಮೀಯ 52:12 - ಪರಿಶುದ್ದ ಬೈಬಲ್12 ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.