ಯೆರೆಮೀಯ 52:14 - ಪರಿಶುದ್ದ ಬೈಬಲ್14 ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಧಿಪತಿಯ ಅಧಿನದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.