Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:15 - ಪರಿಶುದ್ದ ಬೈಬಲ್‌

15 ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದರಿದ್ರರಲ್ಲಿ ಅನೇಕರನ್ನೂ ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:15
7 ತಿಳಿವುಗಳ ಹೋಲಿಕೆ  

ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’


ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು