Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:16 - ಪರಿಶುದ್ದ ಬೈಬಲ್‌

16 ಆದರೆ ಕೆಲವು ಕಡುಬಡವರನ್ನು ನೆಬೂಜರದಾನನು ಆ ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಆ ಜನರನ್ನು ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೊಲಗಳನ್ನೂ ದ್ರಾಕ್ಷೆಯ ತೋಟಗಳನ್ನೂ ವ್ಯವಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನೆಬೂಜರದಾನನು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:16
6 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.


“ನರಪುತ್ರನೇ, ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳಲ್ಲಿ ಇಸ್ರೇಲ್ ಜನರು ವಾಸಿಸುತ್ತಿದ್ದಾರೆ. ಅವರು ಹೇಳುವುದೇನೆಂದರೆ, ‘ಅಬ್ರಹಾಮನು ಒಬ್ಬನೇ. ಈ ದೇಶವನ್ನೆಲ್ಲಾ ದೇವರು ಅವನಿಗೆ ಕೊಟ್ಟನು. ನಾವು ಈಗ ಬಹಳ ಮಂದಿ ಇದ್ದೇವೆ. ಆದ್ದರಿಂದ ಖಂಡಿತವಾಗಿ ಈ ದೇಶ ನಮಗೇ ಸೇರಿದ್ದಾಗಿದೆ.’


ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು.


ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು