ಯೆರೆಮೀಯ 52:22 - ಪರಿಶುದ್ದ ಬೈಬಲ್22 ಮೊದಲನೇ ಕಂಬದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಬವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಬದಲ್ಲಿಯೂ ದಾಳಿಂಬೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಬದಂತೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಂಬದ ಮೇಲೆ 2:2 ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೆ ಅಲಂಕಾರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು. ಎರಡನೆಯ ಕಂಬವು ದಾಳಿಂಬಹಣ್ಣುಗಳಿಂದ ಅಲಂಕಾರವಾಗಿ ಹಾಗೆಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕಂಬದ ಮೇಲೆ ಎತ್ತರವಾದ ಒಂದು ಕಂಚಿನ ಕುಂಭವಿತ್ತು, ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೇ ಅಲಂಕಾರವಾಗಿತ್ತು. ಅಧ್ಯಾಯವನ್ನು ನೋಡಿ |
ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.