Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:24 - ಪರಿಶುದ್ದ ಬೈಬಲ್‌

24 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೆರಾಯ ಮತ್ತು ಚೆಫನ್ಯರನ್ನು ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದ್ವಾರಪಾಲಕರನ್ನು ಕೂಡ ಸೆರೆಹಿಡಿಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:24
19 ತಿಳಿವುಗಳ ಹೋಲಿಕೆ  

ನಂತರ, ನೆಬೂಜರದಾನನು, ಪ್ರಧಾನಯಾಜಕನಾದ ಸೆರಾಯನನ್ನು, ಎರಡನೆಯ ಯಾಜಕನಾದ ಚೆಫನ್ಯನನ್ನು ಮತ್ತು ಮೂವರು ದ್ವಾರಪಾಲಕರನ್ನು ಹಿಡಿದುಕೊಂಡು ಹೋದನು.


ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.


ಅಜರ್ಯನು ಸೆರಾಯನ ತಂದೆ. ಸೆರಾಯನು ಯೆಹೋಚಾದಾಕನ ತಂದೆ.


ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.


ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.


ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.


ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.


ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.


ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.


ಈಗ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನ್ನು ಸುರಕ್ಷಿತವಾದ ಆ ಮಡಕೆಯಿಂದ ತೆಗೆದುಬಿಡುವೆನು.


ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’


ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು