25 ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.
25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
25 ಅವನು ನಗರದಿಂದ ಸೈನ್ಯಸಂಬಂಧವಾದ ಎಲ್ಲ ವ್ಯವಸ್ಥೆಯನ್ನೂ ಮಾಡುವ ಕಂಚುಕಿಯನ್ನು, ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡುಹೋದನು.
25 ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.
25 ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.
ನೆಬೂಜರದಾನನು ಸೇನೆಯ ಸೇನಾಧಿಕಾರಿಯೊಬ್ಬನನ್ನು ಹಿಡಿದುಕೊಂಡು ಹೋದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ರಾಜನ ಐದು ಮಂದಿ ಸಲಹೆಗಾರರನ್ನು ಹಿಡಿದೊಯ್ದನು. ಅವನು ಸೇನೆಯ ಅಧಿಕಾರಿಯ ಕಾರ್ಯದರ್ಶಿಯನ್ನು ಹಿಡಿದೊಯ್ದನು. ಸೇನಾಧಿಕಾರಿಯ ಕಾರ್ಯದರ್ಶಿಯು ಸಾಮಾನ್ಯ ಜನರನ್ನು ಒಟ್ಟುಗೂಡಿಸಿ, ಅವರನ್ನು ಸೈನಿಕರನ್ನಾಗಿ ಆರಿಸುತ್ತಿದ್ದನು. ನೆಬೂಜರದಾನನು ನಗರದಲ್ಲಿ ಸಿಕ್ಕಿದ ಇತರ ಅರವತ್ತು ಮಂದಿಯನ್ನು ಹಿಡಿದೊಯ್ದನು. ಈ ಜನರು ಸಾಮಾನ್ಯ ಜನರಾಗಿದ್ದರು.
“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.