ಯೆರೆಮೀಯ 52:26 - ಪರಿಶುದ್ದ ಬೈಬಲ್26-27 ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.