ಯೆರೆಮೀಯ 52:30 - ಪರಿಶುದ್ದ ಬೈಬಲ್30 ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.