Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:4
22 ತಿಳಿವುಗಳ ಹೋಲಿಕೆ  

ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,


“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.


“ನಿನ್ನ ಸುತ್ತಲೂ ನಾನು ಸೈನ್ಯವನ್ನಿಟ್ಟಿದ್ದೇನೆ. ಅರೀಯೇಲೇ, ನಿನಗೆ ವಿರುದ್ಧವಾಗಿ ನಾನು ಯುದ್ಧದ ಬುರುಜನ್ನು ಕಟ್ಟಿಸಿರುತ್ತೇನೆ.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.


ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.


ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.


ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.


ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.


ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”


ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು