Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:6 - ಪರಿಶುದ್ದ ಬೈಬಲ್‌

6 ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:6
23 ತಿಳಿವುಗಳ ಹೋಲಿಕೆ  

ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು.


ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’


‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು