ಯೆರೆಮೀಯ 52:7 - ಪರಿಶುದ್ದ ಬೈಬಲ್7 ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿಹೋದರು; (ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು); ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು. ಅಧ್ಯಾಯವನ್ನು ನೋಡಿ |