ಯೆರೆಮೀಯ 52:8 - ಪರಿಶುದ್ದ ಬೈಬಲ್8 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.