9 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.
9 ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ.
ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.
ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.