ಯೆರೆಮೀಯ 6:1 - ಪರಿಶುದ್ದ ಬೈಬಲ್1 ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.