ಯೆರೆಮೀಯ 6:10 - ಪರಿಶುದ್ದ ಬೈಬಲ್10 ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 [ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”