11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.
11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
11 ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.
11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”
ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.
ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.
ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.
ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”
ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.
ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.
ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.
ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನ್ನು ನಿನಗೆ ಕೊಡುತ್ತೇನೆ. ಇದನ್ನು ನುಂಗು. ಇದು ನಿನ್ನ ಹೊಟ್ಟೆಯನ್ನು ತುಂಬಲಿ.” ಆಗ ನಾನು ಆ ಸುರುಳಿಯನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.
ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.