ಯೆರೆಮೀಯ 6:13 - ಪರಿಶುದ್ದ ಬೈಬಲ್13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.