ಯೆರೆಮೀಯ 6:19 - ಪರಿಶುದ್ದ ಬೈಬಲ್19 ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.