Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:20 - ಪರಿಶುದ್ದ ಬೈಬಲ್‌

20 ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:20
24 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


“ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,


ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು