ಯೆರೆಮೀಯ 6:21 - ಪರಿಶುದ್ದ ಬೈಬಲ್21 “ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದಕಾರಣ ಇಗೋ, ನಾನು ಈ ಜನರ ಮುಂದೆ ಆಟಂಕಗಳನ್ನು ಒಡ್ಡುವೆನು; ತಂದೆಗಳೂ ಮಕ್ಕಳೂ ಅವುಗಳನ್ನು ಎಡವುವರು, ನೆರೆಹೊರೆಯವರೂ ನಾಶವಾಗುವರು. ಇದೇ ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.” ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.