ಯೆರೆಮೀಯ 6:22 - ಪರಿಶುದ್ದ ಬೈಬಲ್22 ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.