Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:23 - ಪರಿಶುದ್ದ ಬೈಬಲ್‌

23 ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಓ ಚೀಯೋನಿನ ಪುತ್ರಿಯೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:23
21 ತಿಳಿವುಗಳ ಹೋಲಿಕೆ  

ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.


ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.


ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ. ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ.


ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.


ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ಈ ದಿವಸ ನೋಬಿನಲ್ಲಿ ಸೈನ್ಯವು ತಂಗುವದು. ಜೆರುಸಲೇಮಿನ ಪರ್ವತವಾಗಿರುವ ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಯುದ್ಧಮಾಡಲು ಸೈನ್ಯವು ಸಿದ್ಧವಾಗುವುದು.


ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.


“ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


“ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


“ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”


“ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು