Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:24 - ಪರಿಶುದ್ದ ಬೈಬಲ್‌

24 ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು. ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:24
19 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.


ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:


ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ಆಗ ಅರಸನಾದ ಬೇಲ್ಶಚ್ಚರನ ಅಧಿಕಾರಿಗಳಿಗೆ ಏನೂ ತೋಚದಂತಾಯಿತು. ಅರಸನು ಮತ್ತಷ್ಟು ಅಂಜಿದನು ಮತ್ತು ಕಳವಳಪಟ್ಟನು. ಅವನ ಮುಖವು ಭಯದಿಂದ ಕಳೆಗುಂದಿತು.


ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.


ತಮ್ಮ ಕೈಗಳನ್ನು ಮೇಲಕ್ಕೆ ಎತ್ತುವಷ್ಟು ದುಃಖ ಮತ್ತು ಆಯಾಸ ಅವರಲ್ಲಿದೆ. ಅವರ ಕಾಲುಗಳು ನೀರಿನಂತಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು