ಯೆರೆಮೀಯ 6:26 - ಪರಿಶುದ್ದ ಬೈಬಲ್26 ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು. ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.