ಯೆರೆಮೀಯ 6:28 - ಪರಿಶುದ್ದ ಬೈಬಲ್28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.