ಯೆರೆಮೀಯ 6:29 - ಪರಿಶುದ್ದ ಬೈಬಲ್29 ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.