ಯೆರೆಮೀಯ 6:8 - ಪರಿಶುದ್ದ ಬೈಬಲ್8 ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.” ಅಧ್ಯಾಯವನ್ನು ನೋಡಿ |
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.