Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:9 - ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲಿನ ಶೇಷವನ್ನು ದ್ರಾಕ್ಷೆಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷೆಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರಿಗಿ ರೆಂಬೆಗಳಲ್ಲಿ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:9
7 ತಿಳಿವುಗಳ ಹೋಲಿಕೆ  

“ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು