Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:11 - ಪರಿಶುದ್ದ ಬೈಬಲ್‌

11 ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:11
16 ತಿಳಿವುಗಳ ಹೋಲಿಕೆ  

ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?


ನನ್ನ ದೇವರೆ, ನನ್ನ ಪ್ರಾರ್ಥನೆಯನ್ನು ಕೇಳು. ನಿನ್ನ ಕಣ್ಣುಗಳನ್ನು ತೆರೆದು ನಮಗಾದ ಎಲ್ಲ ಕೇಡನ್ನು ನೋಡು. ನಿನ್ನ ಹೆಸರುಳ್ಳ ಪಟ್ಟಣದ ಗತಿ ಏನಾಗಿದೆ ನೋಡು. ನಾವು ಒಳ್ಳೆಯ ಜನರೆಂದು ನಾನು ಹೇಳುತ್ತಿಲ್ಲ. ನಾವು ಒಳ್ಳೆಯ ಜನರೆಂದು ಇದೆಲ್ಲವನ್ನು ಕೇಳುತ್ತಿಲ್ಲ. ನೀನು ಕರುಣಾಮಯನಾಗಿರುವುದರಿಂದಲೇ ಇದನ್ನೆಲ್ಲ ಕೇಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು