Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:12 - ಪರಿಶುದ್ದ ಬೈಬಲ್‌

12 “ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನನ್ನ ನಾಮವನ್ನು ಮೊದಲು ಪ್ರತಿಷ್ಠಾಪಿಸಿದ ‘ಶಿಲೊ’ ಎಂಬ ಸ್ಥಾನಕ್ಕೆ ಹೋಗಿ ನೋಡಿ. ನನ್ನ ಜನ ಇಸ್ರಯೇಲರ ಅಧರ್ಮದ ನಿಮಿತ್ತ ಆ ಸ್ಥಳಕ್ಕೆ ತಂದ ಗತಿಯನ್ನು ಹೋಗಿ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲ್ಯರ ಅಧರ್ಮದ ನಿವಿುತ್ತ ನಾನು ಅದಕ್ಕೆ ತಂದ ಗತಿಯನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:12
13 ತಿಳಿವುಗಳ ಹೋಲಿಕೆ  

ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.


ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು