Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:14 - ಪರಿಶುದ್ದ ಬೈಬಲ್‌

14 ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಕೃತ್ಯಗಳನ್ನೆಲ್ಲಾ ನಡಿಸಿದ ಕಾರಣ ನನ್ನ ನಾಮಕ್ಕೆ ನೆಲೆಯಾಗಿ ನಿಮ್ಮ ಭರವಸಕ್ಕೆ ಆಧಾರವಾದ ಆಲಯಕ್ಕೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:14
28 ತಿಳಿವುಗಳ ಹೋಲಿಕೆ  

ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.


ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.


ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.


ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು