ಯೆರೆಮೀಯ 7:16 - ಪರಿಶುದ್ದ ಬೈಬಲ್16 “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.