ಯೆರೆಮೀಯ 7:17 - ಪರಿಶುದ್ದ ಬೈಬಲ್17 ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವರು ಜುದೇಯ ಪಟ್ಟಣಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಮಾಡುವುದನ್ನು ನೀನೆ ನೋಡಿರುವೆ ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವರು ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಮಾಡುವದನ್ನು ನೀನು ನೋಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ? ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.