ಯೆರೆಮೀಯ 7:2 - ಪರಿಶುದ್ದ ಬೈಬಲ್2 “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು - ಯೆಹೋವನಿಗೆ ಅಡ್ಡಬೀಳುವದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.