ಯೆರೆಮೀಯ 7:23 - ಪರಿಶುದ್ದ ಬೈಬಲ್23 ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”