ಯೆರೆಮೀಯ 7:24 - ಪರಿಶುದ್ದ ಬೈಬಲ್24 “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”