ಯೆರೆಮೀಯ 7:28 - ಪರಿಶುದ್ದ ಬೈಬಲ್28 ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ. ಅಧ್ಯಾಯವನ್ನು ನೋಡಿ |
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.