ಯೆರೆಮೀಯ 7:29 - ಪರಿಶುದ್ದ ಬೈಬಲ್29 “ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 [ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.