ಯೆರೆಮೀಯ 7:3 - ಪರಿಶುದ್ದ ಬೈಬಲ್3 ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.