ಯೆರೆಮೀಯ 7:30 - ಪರಿಶುದ್ದ ಬೈಬಲ್30 ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆಹೋವನು ಹೀಗನ್ನುತ್ತಾನೆ - ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡಿಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”