Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:31 - ಪರಿಶುದ್ದ ಬೈಬಲ್‌

31 ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ; ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:31
23 ತಿಳಿವುಗಳ ಹೋಲಿಕೆ  

ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.


ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು