ಯೆರೆಮೀಯ 7:32 - ಪರಿಶುದ್ದ ಬೈಬಲ್32 ಹೀಗಿರಲು ನಾನು ಈ ಕಣಿವೆಯನ್ನು ತೋಫೆತ್ ಮತ್ತು ಬೆನ್‌ಹಿನ್ನೊಮೀನ ಕಣಿವೆ ಎಂದು ಕರೆಯದೆ ಇದನ್ನು ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಬರುತ್ತಿವೆ ಎಂಬ ಎಚ್ಚರಿಕೆಯನ್ನು ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನ್ನು ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನ್ನು ಹೂಳುವ ಕಾರಣ ಅದಕ್ಕೆ ಈ ಹೆಸರನ್ನು ಕೊಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಸಂಹಾರದ ತಗ್ಗು ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು. ಅಧ್ಯಾಯವನ್ನು ನೋಡಿ |