ಯೆರೆಮೀಯ 7:34 - ಪರಿಶುದ್ದ ಬೈಬಲ್34 ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.