ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.
“ಯೆರೆಮೀಯನೇ, ಬಾಬಿಲೋನಿನಲ್ಲಿರುವ ಎಲ್ಲಾ ಬಂಧಿಗಳಿಗೆ ಈ ಸಂದೇಶವನ್ನು ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನ್ನುವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನ್ನು ಕಳುಹಿಸಲಿಲ್ಲ. ನೀವು ಸುಳ್ಳನ್ನು ನಂಬುವಂತೆ ಅವನು ಮಾಡಿದ್ದಾನೆ.
ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.
ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನ್ನನ್ನು ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನ್ನು ನಂಬುವಂತೆ ನೀನು ಮಾಡಿರುವೆ.
ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.
ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!