ಯೆರೆಮೀಯ 7:7 - ಪರಿಶುದ್ದ ಬೈಬಲ್7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.